ಸುದ್ದಿ ಕಣಜ.ಕಾಂ | DISTRICT | PROTEST
ಶಿವಮೊಗ್ಗ: ವರ್ಷಕ್ಕೆ 2 ಕೋಟಿ ಉದ್ಯೋಗದ ಸುಳ್ಳು ಭರವಸೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಜಿಲ್ಲಾ ಯುವ ಕಾಂಗ್ರೆಸ್ ನಿಂದ ನಿರುದ್ಯೋಗ ದಿನವಾಗಿ ಆಚರಿಸಲಾಯಿತು. ಈ ವೇಳೆ ಪಕೋಡ ತಯಾರಿಸಿ, ಹಣ್ಣುಗಳನ್ನು ಮಾರಾಟ ಮಾಡಲಾಯಿತು.
ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಏಳು ವರ್ಷಗಳ ಅಧಿಕಾರ ನಡೆಸಿ ಯುವಕರಿಗೆ ಯಾವುದೇ ಉದ್ಯೋಗ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
READ | ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಯುವತಿಯ ಕೈಯಿಂದಲೇ ಮೊಬೈಲು ಕಿತ್ತು ಪರಾರಿಯಾದ ಖದೀಮ, ಒಂದೇ ದಿನ 3 ಮೂರು ಮೊಬೈಲ್ ಕಳವು
ಅಶೋಕ ವೃತ್ತದಲ್ಲಿ ಅಣಕು ಪ್ರದರ್ಶನ
ನಗರದ ಅಶೋಕ್ ವೃತ್ತದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಪಕೋಡ, ಹಣ್ಣು, ತರಕಾರಿ ಹೂವು ಮಾರಾಟ ಮಾಡುವ ಅಣಕು ಪ್ರದರ್ಶನದ ಮೂಲಕ ಯುವಕರ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.
ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್, ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯ ಎಚ್.ಸಿ. ಯೋಗೇಶ್ ,ರೇಖಾ ರಂಗನಾಥ್ ಹಲವರು ಭಾಗವಹಿಸಿದ್ದರು.
https://www.suddikanaja.com/2021/03/31/army-tanker-and-air-jet-install-in-mrs-circle/