ಸುದ್ದಿ ಕಣಜ.ಕಾಂ | DISTRICT | HUMAN INTEREST
ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮೊಮ್ಮಗ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನೆಟ್ಟಿಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಜ್ಞಾನೇಂದ್ರ ಅವರು ಆರೋಗ್ಯ ತಪಾಸಣೆಗೋಸ್ಕರ ಆಸ್ಪತ್ರೆಗೆ ತೆರಳಿದ ವಿಡಿಯೋ ತುಣುಕು ವೈರಲ್ ಆಗಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನ ಆರೋಗ್ಯ ವಿಚಾರಿಸಲು ಸರ್ಕಾರಿ ಆಸ್ಪತ್ರೆಗೆ ಭೇಟಿ, ವಿಡಿಯೋ ವೀಕ್ಷಿಸಲು ಲಿಂಕ್ ಮೇಲೆ ಕ್ಲಿಕ್ ಮಾಡಿ
ಜ್ಞಾನೇಂದ್ರ ಅವರ 9 ತಿಂಗಳ ಮೊಮ್ಮಗ ಆರ್ಯವರ್ಥನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಪರಿಣಾಮ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಗ್ಯ ವಿಚಾರಿಸುವುದಕ್ಕಾಗಿ ಜ್ಞಾನೇಂದ್ರ ಅವರು ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದಿದ್ದೇ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲಿ ವೈದ್ಯರನ್ನು ಸಂಪರ್ಕಿಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ವಿಡಿಯೋ ವೈರಲ್, ಜನರಿಂದ ಮೆಚ್ಚುಗೆ
ರಾಜ್ಯದ ಗೃಹ ಸಚಿವರು ತಮ್ಮ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಸರಳತೆ ಮೆರೆದಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
https://www.suddikanaja.com/2021/08/07/home-minister-portfolio-to-aaraga-jnanedra/