ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ವಾಕಿಂಗ್ ಹೋಗುವ ಮುನ್ನ ಹುಷಾರ್! ಕಾರಣ ಭದ್ರಾವತಿಯಲ್ಲಿ ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿ ಡಿಕ್ಕಿ ಹೊಡೆದಿದ್ದು ಅವರು ಮೃತಪಟ್ಟಿದ್ದಾರೆ.
ತಾಲೂಕಿನ ಅರಳಿಹಳ್ಳಿ ತಿಪ್ಲಾಪುರ ರಸ್ತೆಯಲ್ಲಿ ಭಾನುವಾರ ಅಪಘಾತ ಸಂಭವಿಸಿದ್ದು, ಅರಳಿಹಳ್ಳಿ ಗ್ರಾಮ ನಿವಾಸಿ ಬಸವರಾಜ್(50) ಎಂಬುವರು ಮೃತಪಟ್ಟಿದ್ದಾರೆ.
ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಪರಾರಿ
ಚಾಲಕನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಚಲಾಯಿಸಿಕೊಂಡು ಬಂದಿದ್ದು, ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ವ್ಯಕ್ತಿ ಮೃತಪಟ್ಟಿದ್ದಾರೆ.
ಚಾಲಕನು ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.