ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ಗಾಜನೂರಿನಲ್ಲಿ ಮಂಗಳವಾರ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿವೆ.
ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರು ಭದ್ರಾವತಿ ಮೂಲದವರೆಂದು ತಿಳಿದುಬಂದಿದೆ. ಬಸ್ ನಲ್ಲಿದ್ದ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಗಾಜನೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.