ಸೌಥ್ ಸೆಂಟ್ರಲ್ ರೈಲ್ವೆಯಲ್ಲಿ 4,103 ಹುದ್ದೆಗಳ ಭರ್ತಿ, ಎಸ್ಸೆಸ್ಸೆಲ್ಸಿ, ಐಟಿಐ ಆಗಿದ್ರೆ ಸಾಕು ನೇರ‌ ನೇಮಕಾತಿ

 

 

ಸುದ್ದಿ‌ ಕಣಜ.ಕಾಂ | NATIONAL | JOB JUNCTION
ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ‌ ಇರುವವರಿಗೆ ಇಲಾಖೆ ಶುಭ ಸುದ್ದಿ‌ ನೀಡಿದೆ. ಪೂರ್ವ ವಿಭಾಗಕ್ಕೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಸೌಥ್‌ ಸೆಂಟ್ರಲ್‌ ರೈಲ್ವೆ ವಿಭಾಗದಲ್ಲಿ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.
ಒಟ್ಟು 4103 ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತಿದ್ದು, ಅರ್ಜಿ‌ ಸಲ್ಲಿಸಲು ನವೆಂಬರ್ 3 ಅಂತಿಮ ದಿನವಾಗಿದೆ.

READ | 8, 10, ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ

ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ₹100 ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರು, ಅಂಗವಿಕಲರು, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ವಿಭಾಗದಲ್ಲಿ ಹುದ್ದೆಗಳು ಖಾಲಿ ಇವೆ.‌ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ, ಐಟಿಐನಲ್ಲಿ‌ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಇದು ಉತ್ತಮ ಅವಕಾಶವಾಗಿದ್ದು ಅಭ್ಯರ್ಥಿಗಳು ಸದುಪಯೋಗ ಪಡೆಯಬಹುದಾಗಿದೆ.
ಅಭ್ಯರ್ಥಿಗಳು ಕನಿಷ್ಠ 15, ಗರಿಷ್ಠ 24 ವರ್ಷ ತುಂಬಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಲಭ್ಯವಿದೆ.

WEBSITE

https://www.suddikanaja.com/2021/09/25/government-jobs-vacant-in-karnataka/

error: Content is protected !!