ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾಡಳಿತ, ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಕೌಶಲ ಮಿಷನ್ ಆಶ್ರಯದಲ್ಲಿ ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಆಗಸ್ಟ್ 26ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
https://www.suddikanaja.com/2021/01/19/job-fair-in-shivamogga-2/
READ | ಹೇರ್ ಬ್ಯಾಂಡ್ನಲ್ಲಿತ್ತು ₹ 5.58 ಲಕ್ಷ ಮೌಲ್ಯದ ಚಿನ್ನ, ಹೇಗೆ ಸಿಕ್ಕಿಬಿದ್ದ ಖದೀಮ?
ಅಂದು ಬೆಳಗ್ಗೆ 9.30ರಿಂದ ಉದ್ಯೋಗ ಮೇಳ ನಡೆಯಲಿದೆ. ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿದ್ದು, ಆಯ್ಕೆಯಾದವರಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
READ | ಕಣ್ಮನ ಸೆಳೆದ ಓಣಂ ಹಬ್ಬ, ಹೇಗಿತ್ತು ಆಚರಣೆ, ಏನೇನು ವಿಶೇಷ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಆನ್ ಲೈನ್ ಮೂಲಕ ಮಾತ್ರ ನೋಂದಣಿಗೆ ಅವಕಾಶ ನೀಡಲಾಗಿದೆ. ಪ್ರತಿಷ್ಠಿತ ಕಂಪೆನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನ ನಡೆಯಲಿದೆ. 18ರಿಂದ 35 ವರ್ಷದ ಏಳನೇ ತರಗತಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಲು ಅವಕಾಶವಿದೆ. www.tinyurl.com/smgmela ವೆಬ್ ತಾಣಕ್ಕೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08182 255294 ಸಂಪರ್ಕಿಸಲು ತಿಳಿಸಲಾಗಿದೆ.
https://www.suddikanaja.com/2021/04/28/new-ration-card-number-distribution/

