ಸುದ್ದಿ ಕಣಜ.ಕಾಂ ಬೆಂಗಳೂರು: ಗುರುವಾರ ರಾತ್ರಿಯಿಂದ ಜಾರಿಯಾಗಬೇಕಿದ್ದ ರಾತ್ರಿ ಕಫ್ರ್ಯೂ ಅನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಅಭಿಪ್ರಾಯ ಹಿನ್ನೆಲೆ ಕಫ್ರ್ಯೂ ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.
ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರದ ಕೊರೊನಾ ವೈರಸ್ ಹರಡುವಿಕೆ ತಡೆಗೆ ತಜ್ಞರ ಸಲಹೆಯಂತೆ ನೈಟ್ ಕಫ್ರ್ಯೂ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂ ಅಗತ್ಯ ಇಲ್ಲವೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ, ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮನಗಂಡು ಕಫ್ರ್ಯೂ ಕೈಬಿಡಲಾಗಿದೆ.
ಸ್ವಯಂ ನಿರ್ಬಂಧಕ್ಕೆ ಮನವಿ: ಕೊರೊನಾ ವಿರುದ್ಧ ಜಯಿಸಲು ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯ ಪಡೆ (ಟಾಸ್ಕ್ ಫೋರ್ಸ್) ಕೊರೊನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. […]
ಸುದ್ದಿ ಕಣಜ.ಕಾಂ| DISTRICT | 27 AUG 2022 ಶಿವಮೊಗ್ಗ: ಜಿಲ್ಲೆಯಲ್ಲಿ ಗಣಪತಿ ಮೆರವಣಿಗೆ ವೇಳೆ ಅನ್ಯಕೋಮಿನವರ ವಿರುದ್ಧ ಘೋಷಣೆಗಳನ್ನು ಕೂಗಿದರೆ ಹುಷಾರ್! ಕಾರಣ, ಅಂತಹವರ ಮೇಲೆ ಎಫ್.ಐ.ಆರ್ ದಾಖಲಾಗಲಿದೆ. READ | […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಒದಗಿಸುತ್ತಿರುವ ಶುದ್ಧ ಕುಡಿಯುವ ನೀರಿನ ಗುಣಮಟ್ಟವನ್ನು (drinking water quality test) ಪರೀಕ್ಷಿಸಿ, ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ […]